Rashmika Mandanna: ತಮಿಳಿನ ಸ್ಟಾರ್ ನಟ ವಿಜಯ್ ಜೊತೆ ಈಗಾಗಲೇ ಸೂಪರ್ ಹಿಟ್ ಸಿನಿಮಾದಲ್ಲಿ ನಟಿಸಿರುವ ರಶ್ಮಿಕಾ ಮಂದಣ್ಣ ಇದೀಗ ತಮಿಳಿನ ಮತ್ತೊಬ್ಬ ಸ್ಟಾರ್ ನಟನೊಟ್ಟಿಗೆ ನಟಿಸುತ್ತಿದ್ದಾರೆ.
ರಶ್ಮಿಕಾ ಮಂದಣ್ಣ (Rashmika Mandanna) ಸ್ಟಾರ್ ನಟರ ಮೆಚ್ಚಿನ ನಟಿಯಾಗಿ ಬಿಟ್ಟಿದ್ದಾರೆ.

 ತೆಲುಗು, ತಮಿಳಿನ ಬಳಿಕ ಬಾಲಿವುಡ್​ನಲ್ಲಿಯೂ ಮಿಂಚು ಹರಿಸಿರುವ ರಶ್ಮಿಕಾ ಮಂದಣ್ಣ, ಅಲ್ಲಿಯೂ ಹಿಟ್ ಮೇಲೆ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಬಾಲಿವುಡ್​ನಲ್ಲಿ ಹಲವು ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದರೂ ದಕ್ಷಿಣ ಭಾರತದ ಚಿತ್ರರಂಗದೊಂದಿಗಿನ ನಂಟು ಬಿಟ್ಟುಕೊಡದೆ ಇಲ್ಲಿಯೂ ಒಳ್ಳೆಯ ಸಿನಿಮಾಗಳನ್ನು ಆಯ್ದುಕೊಳ್ಳುತ್ತಿದ್ದಾರೆ. ಈಗಾಗಲೇ ತಮಿಳಿನಲ್ಲಿ ಸ್ಟಾರ್ ನಟ ವಿಜಯ್ ಜೊತೆ ಸಿನಿಮಾ ಮಾಡಿರುವ ರಶ್ಮಿಕಾ ಇದೀಗ ಮತ್ತೊಬ್ಬ ತಮಿಳು ಸ್ಟಾರ್ ನಟರೊಡನೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

ತಮಿಳಿನ ಸ್ಟಾರ್ ನಟ ಧನುಶ್​ರ ಹೊಸ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದು, ಧನುಶ್ ಹಾಗೂ ರಶ್ಮಿಕಾ ನಟಿಸುತ್ತಿರುವ ದೃಶ್ಯವೊಂದರ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಲೀಕ್ ಆಗಿದೆ. ಧನುಶ್ ಅನ್ನು ಕೈ ಹಿಡಿದು ರಶ್ಮಿಕಾ ಎಳೆದೊಯ್ಯುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋನಲ್ಲಿ ರಶ್ಮಿಕಾ ಬಿಳಿ ಬಣ್ಣದ ಚೂಡಿದಾರ್ ಧರಿಸಿದ್ದಾರೆ.

ಧನುಶ್ ಹಾಗೂ ರಶ್ಮಿಕಾ ನಟಿಸುತ್ತಿರುವ ಹೊಸ ಸಿನಿಮಾವನ್ನು ತೆಲುಗಿನ ಜನಪ್ರಿಯ ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶನ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಇದೊಂದು ರಾಜಕೀಯ ವಸ್ತುವುಳ್ಳ ಕತೆಯಾಗಿದ್ದು, ರಾಜಕೀಯ ಕುತಂತ್ರಗಳನ್ನು ಸಾಮಾನ್ಯ ವ್ಯಕ್ತಿಯೊಬ್ಬ ಹೇಗೆ ಎದುರಿಸುತ್ತಾನೆ, ರಾಜಕೀಯದ ದೌರ್ಜನ್ಯಕ್ಕೆ ಹೇಗೆ ತುತ್ತಾಗುತ್ತಾನೆ ಅದರಿಂದ ಹೊರಗೆ ಹೇಗೆ ಬರುತ್ತಾನೆ ಎಂಬ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಇದೇ ಮೊದಲ ಬಾರಿಗೆ ರಶ್ಮಿಕಾ ಹಾಗೂ ಧನುಶ್ ಒಟ್ಟಿಗೆ ನಟಿಸುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಪ್ರಸ್ತುತ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತೆಲುಗಿನಲ್ಲಿ ಅಲ್ಲು ಅರ್ಜುನ್ ಜೊತೆಗೆ ‘ಪುಷ್ಪ 2’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಅದರ ಜೊತೆಗೆ ಮಹಿಳಾ ಪ್ರಧಾನ ಕತೆಯುಳ್ಳ ‘ಗರ್ಲ್​ಫ್ರೆಂಡ್’ ಸಿನಿಮಾದಲ್ಲಿಯೂ ರಶ್ಮಿಕಾ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಕನ್ನಡಿಗ ದೀಕ್ಷಿತ್ ಶೆಟ್ಟಿ ನಾಯಕ. ತಮಿಳಿನಲ್ಲಿ ಧನುಶ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಹಿಂದಿಯಲ್ಲಿ ವಿಕ್ಕಿ ಕೌಶಲ್ ಜೊತೆಗೆ ‘ಛಾವಾ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ವರುಣ್ ಧವನ್ ಜೊತೆಗೆ ಹೊಸ ಸಿನಿಮಾಕ್ಕೆ ಸಹಿ ಹಾಕಿದ್ದಾರೆ. ರಣ್​ಬೀರ್ ಕಪೂರ್ ಜೊತೆಗೆ ‘ಅನಿಮಲ್ ಪಾರ್ಕ್’ ಸಿನಿಮಾದಲ್ಲಿಯೂ ನಟಿಸಲಿದ್ದಾರೆ