NIT KARNATAKA Recruitment 2024: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (National Institute of Technology -Karnataka) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸೂಕ್ತ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳು ಖಾಲಿ ಇದ್ದು ಆಸಕ್ತಿ ಹೊಂದಿದವರು ಈ ಕೂಡಲೇ ಅರ್ಜಿ ಸಲ್ಲಿಸಿ. ಜೂನ್ 20,2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.ಆಸಕ್ತಿ ಹೊಂದಿದವರು ಈಗಲೇ (RESUME)ಕಳುಹಿಸಿ.ಸೂರತ್ಕಲ್ ನಲ್ಲಿ ಕೆಲಸ ಮಾಡಲು ಇಚ್ಚಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮುನ್ನ ಹುದ್ದೆಯ ಬಗ್ಗೆ ತಿಳಿದುಕೊಳ್ಳಬೇಕಾಗಿರುವ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (National Institute of Technology -Karnataka)ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಕಡ್ಡೆಯವಾಗಿ ವಿಶ್ವವಿದ್ಯಾಲಯ/ ಮಂಡಳಿಯಿಂದ ಮಾನ್ಯತೆ ಪಡೆದ ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಸೈನ್ಸ್/ ಇನ್ಫರ್ಮೇಷನ್ ಸೈನ್ಸ್ ನಲ್ಲಿ ಬಿಇ/ ಬಿ. ಟೆಕ್ ಪೂರ್ಣಗೊಳಿಸಿರಬೇಕು.

ವಯೋಮಿತಿ:
ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಸಂಬಳ:
ಮಾಸಿಕ ₹25,000

ಉದ್ಯೋಗದ ಸ್ಥಳ:
ಸೂರತ್ಕಲ್

ಆಯ್ಕೆ ಮಾಡುವ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಕ್ವಾಲಿಪಿಕೇಶನ್
ಅನುಭವ

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಆನಲೈನ್ ಇ-ಮೇಲ್ ಐಡಿ ಮೂಲಕ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ projectrecruitment.nitk@gmail.com ಇ ಮೇಲ್ ಮಾಡಿ ಜೂನ್ 20 ರೊಳಗೆ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20/05/2024
ಇ ಮೇಲ್ ಕಳುಹಿಸಲು ಕೊನೆಯ ದಿನಾಂಕ: ಜೂನ್ 20,2024

Follow Karunadu Today for more Jobs Related News

Click here to Join Our Whatsapp Group